ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಕ್ಟೋಬರ್ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿಸಂಗೀತ ನಿರ್ದೇಶಕ ಹಂಸಲೇಖ (Hamsalekha) ಉದ್ಘಾಟಿಸಲಿದ್ದಾರೆ .
ಹೀಗಾಗಿದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಆನೆಗಳ (Elephant) ಪಟ್ಟಿಯನ್ನು ಕೂಡ ಇದೀಗ ಬಿಡುಗಡೆ ಮಾಡಲಾಗಿದೆ.
ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ 14ಆನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಫೈನಲ್ ಮಾಡಿದ್ದಾರೆ. ಮೊದಲ ಹಂತದಲ್ಲಿ ಇಂದು(ಸೆ.01) 9ಆನೆಗಳನ್ನು ಹಾಗೂ ಎರಡನೇ ಹಂತದಲ್ಲಿ ಉಳಿದ 5ಆನೆಗಳನ್ನು ಅರಮನೆಗೆ ಬರಲಿದೆ.
. ಅಭಿಮನ್ಯ, ವಿಜಯ, ವರಲಕ್ಷ್ಮಿ, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಪ್ರಶಾಂತ್, ಸುಗ್ರೀವ, ಕಂಜನ್, ರೋಹಿತ್, ಲಕ್ಷ್ಮಿ, ಹಿರಣ್ಯ ಸೇರಿ ಒಟ್ಟು 14 ಆನೆಗಳನ್ನು ಫೈನಲ್ ಮಾಡಲಾಗಿದೆ.
ಈಗಾಗಲೇಮೈಸೂರಿನತ್ತ ಅಭಿಮನ್ಯು, ವಿಜಯ, ಅರ್ಜುನ, ಧನಂಜಯ, ಭೀಮ, ಮಹೇಂದ್ರ, ಕಂಜನ್, ಹಿರಣ್ಯ, ವರಲಕ್ಷ್ಮಿ ಪಯಣ ಬೆಳೆಸಿದ್ದಾರೆ. ಎರಡನೇ ಹಂತದಲ್ಲಿ ಉಳಿದ ಆನೆಗಳು ಆಗಮಿಸಲಿವೆ.