ಮೈಸೂರು ದಸರಾ ಮಹೋತ್ಸವ 2023: ಅಲಂಕೃತ ಗಜಗಳಿಗೆ ಪುಷ್ಪಾರ್ಚನೆ ಮೂಲಕ ಗಜಪಯಣಕ್ಕೆ ಚಾಲನೆ

ಹೊಸದಿಗಂತ ವರದಿ ಮೈಸೂರು:

ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾಗೆ ನಾಂದಿಯಾಡುವ ಗಜಪಯಣಕ್ಕೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.

ಇಂದು ಬೆಳಗ್ಗೆ 9.45 ರಿಂದ 10-15 ರ ನಡುವೆ ಸಲುವ ತುಲಾ ಶುಭ ಲಗ್ನದಲ್ಲಿ ಸಂಪ್ರದಾಯದಂತೆ ಮೈಸೂರು ಅರಮನೆ ಪುರೋಹಿತರಾದ ಪ್ರಹಲ್ಲಾದರಾವ್ ತಂಡ ವೀರನಹೊಸಹಳ್ಳಿ ಗೇಟ್ ಬಳಿಯ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನೆರೆವೇರಿಸಿದರು.

ಗಜಪಯಣದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಅರ್ಜುನ, ಭೀಮಾ, ಗೋಪಿ, ಧನಂಜಯಾ, ವರಲಕ್ಷ್ಮಿ, ವಿಜಯಾ, ಮಹೇಂದ್ರ ಹಾಗೂ ಕಂಜನ್ ಆನೆಗಳು ಮೈಸೂರಿಗೆ ಆಗಮಿಸಲಿದೆ.

ಈ ವೇಳೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹುಣಸೂರು ಶಾಸಕ ಹರೀಶ್ ಗೌಡ, ಮೇಯರ್ ಶಿವಕುಮಾರ್ , ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ, ಅರಣ್ಯಧಿಕಾರಿ ಸೌರಭ್ ಕುಮಾರ್ ಹಾಗೂ ಇತರೆ ಗಣ್ಯರು ಉಪಸ್ಧಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!