ಮೈಸೂರು ದಸರಾ: ರಾಜಮನೆತನವನ್ನು ಆಹ್ವಾನಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಹೊಸದಿಗಂತ ವರದಿ, ಮೈಸೂರು:

ನಾಡಹಬ್ಬ ಮೈಸೂರು ದಸರಾ ಉತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.

ಶುಕ್ರವಾರ ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಹೆಚ್.ಎಂ.ಚಂದ್ರಶೇಖರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!