ಮೈಸೂರು ದಸರಾ: ಕೆ.ಎಸ್.ಆರ್.ಟಿ.ಸಿಯಿಂದ ವಿಶೇಷ ಪ್ಯಾಕೇಜ್ ಟೂರ್

ಹೊಸ ದಿಗಂತ ವರದಿ, ಮೈಸೂರು:

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರವಾಸಿಗರಿಗಾಗಿ ಹಾಗೂ ಅವರ ಅನುಕೂಲಕ್ಕಾಗಿ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಕರ್ನಾಟಕ ಸಾರಿಗೆ ವಾಹನ ಮತ್ತು ಸಿಟಿ ವೋಲ್ವೋ ವಾಹನಗಳ ಮಾದರಿಯಲ್ಲಿ ಪ್ಯಾಕೇಜ್ ಟೂರ್ ಗಳ ವ್ಯವಸ್ಥೆಯನ್ನು ಅಕ್ಟೋಬರ್ 20 ರಿಂದ ಅಕ್ಟೋಬರ್ 29 ರವರೆಗೆ ಕಲ್ಪಿಸಲಾಗಿದೆ.

ಪ್ಯಾಕೆಜ್ ಟೂರ್ ಗಳಿಗಾಗಿ ಪ್ರವಾಸಿಗರಿಗೆ ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ನಿಗಮದ ಮೈಸೂರು ಕೇಂದ್ರಿಯ ಬಸ್ ನಿಲ್ದಾಣ ಮತ್ತು ಕೆ.ಎಸ್.ಆರ್.ಟಿ.ಸಿ ಖಾಸಗಿ ಅವತಾರ್ ಬುಕ್ಕಿಂಗ್ ಕೌಂಟರ್ ಹಾಗೂ www.ksrtc.karnataka.gov.in ವೆಬ್ ಸೈಟ್ ಮೂಲಕ ಮುಂಗಡ ಆಸನ ಕಾಯ್ದಿರಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!