ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಭಾರಿ ನಾದಬ್ರಹ್ಮ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿಯ ದಸರಾ ಉದ್ಘಾಟನೆಯನ್ನು ಸಂಗೀತ ನಿರ್ದೇಶಕ ಹಂಸಲೇಖ ನೆರವೇರಸಲಿದ್ದಾರೆ ಎಂದು ಹೇಳಿದ್ದಾರೆ.
ಅ.15ರಂದು ದಸರಾ ಉದ್ಘಾಟನೆ
ಮೈಸೂರು ದಸರಾ ಹಬ್ಬಕ್ಕೆ ಅಕ್ಟೋಬರ್ 15ರಂದು ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಕಾರ್ಯಕ್ರಮ ಸೇರಿದಂತೆ ಎಲ್ಲವನ್ನೂ ವ್ಯವಸ್ಥಿತವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.