ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಸ್ಕೃತಿಕ ನಗರಿ ಮೈಸೂರು 10 ದಿನಗಳ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜಾಗಿದ್ದು, ಇಂದು ಗುರುವಾರ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಚಾಮುಂಡಿ ತಾಯಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ದರುಶನಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.ಸರ್ವಾಲಂಕೃತ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಮಹಿಷಾಸುರ ಮರ್ಧಿನಿಯ ಆರಾಧಕರು ಹತ್ತು ದಿನಗಳ ಕಾಲ ಮೈಸೂರಿನಲ್ಲಿ ಬೀಡುಬಿಟ್ಟು ನಿತ್ಯವೂ ದೇವಿಯ ವಿವಿಧ ಅಲಂಕಾರಗಳನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಕಳೆದ ವರ್ಷ ಭೀಕರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರಳ ಮಟ್ಟದಲ್ಲಿ ಆಚರಣೆಗೆ ಮುಂದಾಗಿತ್ತು. ಆದರೆ, ಈ ವರ್ಷ ರಾಜ್ಯಾದ್ಯಂತ ಸಾಕಷ್ಟು ಮಳೆಯಿಂದ ಜಲಾಶಯಗಳು ತುಂಬಿದ ನಂತರ ಸರ್ಕಾರವು ಅದ್ಧೂರಿ ಉತ್ಸವಗಳನ್ನು ಘೋಷಿಸಿದ್ದು, ಪರಿಸ್ಥಿತಿ ಉತ್ತಮವಾಗಿ ಬದಲಾಗಿವೆ. ಈ ಬಾರಿ ಅದ್ಧೂರಿ ದಸರಾಗೆ ಇಂದು ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ ನೆರವೇರಲಿದೆ.