Monday, August 8, 2022

Latest Posts

ಎಸ್ಸೆಸೆಲ್ಸಿ ಫಲಿತಾಂಶದಲ್ಲಿ ಮೈಸೂರು ಜಿಲ್ಲೆಗೆ ‘ಎ’ ಗ್ರೇಡ್ ಬರುವಂತೆ ಶ್ರಮಿಸಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಹೊಸ ದಿಗಂತ ವರದಿ, ಮೈಸೂರು:

ಮೈಸೂರು ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಎ’ ಗ್ರೇಡ್ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಶಿಕ್ಷಕರು ಪರಿಣಾಮಕಾರಿಯಾಗಿ ಕಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.
ನಗರದ ಶಾರದ ವಿಲಾಸ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ `ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕ್ರಮ ಮತ್ತು ಫಲಿತಾಂಶ ಸುಧಾರಣೆ’ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಶೈಕ್ಷಣಿಕ ಗುಣಮಟ್ಟದ ಮೇಲೆ ಪೋಷಕರ ನಂತರ ಶಿಕ್ಷಕರೇ ಹೆಚ್ಚು ಪರಿಣಾಮ ಬೀರುತ್ತಾರೆ. ಎಲ್ಲ ಮಕ್ಕಳ ಕಲಿಕಾಮಟ್ಟ ಒಂದೇ ರೀತಿ ಇರುವುದಿಲ್ಲ. ಹಾಗಾಗಿ ವಿಭಿನ್ನ ಮಾದರಿಯಲ್ಲಿ ಕಲಿಸುವ ಮೂಲಕ ಮೈಸೂರು ಜಿಲ್ಲೆಗೆ ಉತ್ತಮ ಫಲಿತಾಂಶ ಬರುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಮೈಸೂರು ಜಿಲ್ಲೆಯ ವಿದ್ಯಾರ್ಥಿಗಳು ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬ ಮಾಹಿತಿ ಇದೆ. ಎಸ್ಸೆಸ್ಸೆಲ್ಸಿಯಲ್ಲಿ ಕಲಿಯುವ ವಿದ್ಯಾರ್ಥಿಗಳ ಮೇಲೆ ನಿಗಾವಹಿಸಲು ಶಿಕ್ಷಣ ಇಲಾಖೆಯೂ ತಯಾರಿಸಿರುವ ಮೈಕ್ರೋಪ್ಲಾ÷್ಯನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದರೆ ಉತ್ತಮ ಫಲಿತಾಂಶ ದಾಖಲಿಸಲು ಸಾಧ್ಯವಾಗುತ್ತದೆ ಎಂದರು.
ಕೋವಿಡ್-19 ಕಾರಣದಿಂದ ಅನೇಕ ರಾಜ್ಯಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಿದವು. ಆದರೆ ಕರ್ನಾಟಕದಲ್ಲಿ ಮಾತ್ರ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ, ಉತ್ತಮ ಫಲಿತಾಂಶ ದಾಖಲಾಗಿರುವುದು ಪ್ರಶಂಸನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೀಶ್, ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರಾದ ಸುಮಂಗಲ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಪಾಂಡುರAಗ, ಶಿಕ್ಷಣಾಧಿಕಾರಿ ರಾಜಶೇಖರ್ ಹಾಗೂ ಜಿಲ್ಲೆಯ ಮುಖ್ಯಶಿಕ್ಷಕರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss