Tuesday, August 16, 2022

Latest Posts

30 ತಿಂಗಳೊಳಗೆ ಉಂಡವಾಡಿಯಿoದ ಮೈಸೂರು ನಗರಕ್ಕೆ ನಿತ್ಯನೀರು ಪೂರೈಕೆ: ಸಚಿವ ಭೈರತಿ ಬಸವರಾಜ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮೈಸೂರು:

ಮೈಸೂರು ನಗರಕ್ಕೆ ಉಂಡವಾಡಿಯಿoದ 30 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ನೀರಿನ ಸರಬರಾಜನ್ನು ಮಾಡಲಾಗುವುದು. ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಉಂಡುವಾಡಿಯಿoದ ನೀರು ಸರಬರಾಜು ಮಾಡುವ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ, ಕಾಮಗಾರಿಯನ್ನು ಚುರುಕುಗೊಳಿಸಿ, ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರು, ಸಂಬoಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇನ್ನು 30 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಬಳಿಕ ಮೈಸೂರು ನಗರಕ್ಕೆ ನೀರು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು. ಮೈಸೂರು ನಗರದಲ್ಲಿ ವಾಹನಗಳ ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸಲು ಮಲ್ಟಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದರು. ರಾಜ್ಯದಲ್ಲಿ 7 ಸ್ಮಾರ್ಟ್ ಸಿಟಿಗಳ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಮೈಸೂರಿನ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಬಿಲ್ಡಿಂಗ್‌ಗಳು ಬೀಳುವ ಸ್ಥಿತಿಯಲ್ಲಿವೆ. ಅವುಗಳನ್ನು ಯಾವ ರೀತಿಯಲ್ಲೂ ಉಳಿಸಲು ಸಾಧ್ಯವಿಲ್ಲ. ಆದ್ದರಿಂದ 2 ಕಟ್ಟಡಗಳನ್ನು ನೆಲಸಮ ಮಾಡಿ ಪುನರ್ ನಿರ್ಮಾಣ ಮಾಡಲು ಚಿಂತಿಸಲಾಗಿದೆ. ದೇವರಾಜ ಮಾರುಕಟ್ಟೆಗೆ 100 ಕೋಟಿ ಹಾಗೂ ಲ್ಯಾನ್ಸ್ ಡೌನ್ ಬಿಲ್ಡಿಂಗ್‌ನ್ನು 45 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಲು ಚಿಂತನೆ ಮಾಡಲಾಗುತ್ತದೆ. ದೇವರಾಜ ಮಾರುಕಟ್ಟೆಯನ್ನು ತೆರೆವು ಮಾಡಿ, ಅಲ್ಲಿರುವ ವ್ಯಾಪಾರಸ್ಥರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿ, ಮಾರುಕಟ್ಟೆ ನಿರ್ಮಾಣವಾದ ಮೇಲೆ ಅಲ್ಲಿರುವ 750 ಜನ ವ್ಯಾಪಾರಸ್ಥರಿಗೆ ಅಂಗಡಿಗಳನ್ನು ಪುನಾಃ ನೀಡಲು ಚಿಂತಿಸಲಾಗಿದೆ ಎಂದರು.
ದೇವರಾಜ ಮಾರುಕಟ್ಟೆ ನೆಲಸಮದ ಬಗ್ಗೆ ಹೈಕೋರ್ಟ್ನಲ್ಲಿ ದಾವೆಗಳಿವೆ. ಅದನ್ನು ಕಾನೂನು ರೀತಿ ಕ್ರಮ ತೆಗೆದುಕೊಂಡು ದೇವರಾಜ ಮಾರುಕಟ್ಟೆ ಪುನರ್ ನಿರ್ಮಾಣದ ಬಗ್ಗೆ 2 ತಿಂಗಳಲ್ಲಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss