SHOCKING | ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿತ: ಓರ್ವ ಯುವಕನ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಓರ್ವ ಯುವಕ ಮೃತಪಟ್ಟಿದ್ದಾನೆ.

ಮೈಸೂರಿನ ಗೌಸಿಯಾ ನಗರದ ನಿವಾಸಿ ಸದ್ದಾಂ ಮೃತ ಯುವಕ. ಅಗ್ನಿಶಾಮಕದಳ ಸಿಬ್ಬಂದಿ‌ ಮತ್ತು ಪೊಲೀಸರಿಂದ ರಕ್ಷಣಾ ಕಾರ್ಯ ಮುಂದುವರೆದಿದೆ. ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಹೃದಯ ಭಾಗ, ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಣಿ ಕಾಲೇಜು ಕಟ್ಟಡಕ್ಕೆ ನೂರು ವರ್ಷದ ಇತಿಹಾಸವಿದೆ. ಮೂರು ವರ್ಷಗಳ ಹಿಂದೆ ಇದೆ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿರಲಿಲ್ಲ. ನಂತರ ಜಾಗವನ್ನು ಖಾಲಿ ಮಾಡಲಾಗಿತ್ತು. ಅಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿರಲಿಲ್ಲ. ಇತ್ತೀಚಿಗೆ ಸರ್ಕಾರ ಆ ಕಟ್ಟಡ ಪುನರ್ ನಿರ್ಮಾಣಕ್ಕೆ ಅನುದಾನ ಸಹ ನೀಡಿತ್ತು. ಕಿಟಕಿ ಸರಳು ಸೇರಿದಂತೆ ಹಲವು ವಸ್ತುಗಳನ್ನು ಅಲ್ಲಿಂದ ತೆರವುಗೊಳಿಸಲು ಗುತ್ತಿಗೆ ನೀಡಲಾಗಿತ್ತು. ಅದರಂತೆ ಸದ್ದಾಂ ಸರಿ 14 ಜನ ಕಟ್ಟಡದಲ್ಲಿದ್ದ ಕಿಟಕಿ ಸೇರಿದಂತೆ ವಿವಿಧ ಉಪಕರಣಗಳನ್ನು ತೆಗೆಯುವ ಕೆಲಸ ಮಾಡುತ್ತಿದ್ದರು. ಈ ವೇಳ ಅವಘಡ ಸಂಭವಿಸಿದೆ.

ಗೋಡೆ ಕುಸಿಯುತ್ತಿದ್ದಂತೆ ಅಲ್ಲಿದ್ದ 13 ಜನರು ಸಹ ಆಚೆ ಬಂದಿದ್ದಾರೆ. ಆದರೆ ಸದ್ದಾಂ ಮಾತ್ರ ಹೊರಗೆ ಬರಲು ಸಾಧ್ಯವಾಗಿಲ್ಲ. ಆತ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದನು. ಸದ್ದಾಂ ಕಟ್ಟಡದ ಅವಶೇಷಗಳ ಕೆಳಗೆ ಸಿಲುಕಿರುವುದನ್ನು ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕಗಳ ಸಿಬ್ಬಂದಿ ಪೊಲೀಸರು ಕಾರ್ಯಾಚರಣೆ ಆರಂಭಿಸಿ ನಡೆಸಿದರು. ಬುಧವಾರ ಮುಂಜಾನೆ ಸದ್ದಾಂ ಮೃತದೇಹ ಪತ್ತೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!