ಹೊಸದಿಗಂತ ವರದಿ, ಮೈಸೂರು:
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ರಾತ್ರಿ ನಗರಪ್ರದಕ್ಷಿಣೆ ನಡೆಸಿದರು.
ಕಾರ್ಪೋರೇಷನ್ ನಿಂದ ಸಯ್ಯಾಜಿರಾವ್ ರಸ್ತೆಯ ಸರ್ಕಾರಿ ಆಯುರ್ವೇದಿಕ್ ಕಾಲೇಜ್ ಸರ್ಕಲ್ ನಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲನೆ ನಡೆಸಿದರು. ಪೌರಕಾರ್ಮಿಕರೊಂದಿಗೆ ಮಾತುಕತೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು. ದಸರಾ ಸಂದರ್ಭದಲ್ಲಿ ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಮಹತ್ವದಾಗಿದೆ ಎಂದು ಹೇಳಿದರು. ಹೋಟೆಲ್ ಹೈವೇ ಸರ್ಕಲ್ ಬಳಿ ಪೌರ ಕಾರ್ಮಿಕರೊಂದಿಗೆ ಚಹಾ ಸೇವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಮೇಯರ್ ಶಿವಕುಮಾರ್, ಮೂಡಾ ಮಾಜಿ ಅಧ್ಯಕ್ಷ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ಹಲವರು ಜೊತೆಯಲ್ಲಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ