ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ರೈಲು ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯಿಂದ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಅನಾಮಿಕ ವ್ಯಕ್ತಿ ಆಂಧ್ರ ಪ್ರದೇಶದಿಂದ ಕರೆ ಮಾಡಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿ ಹೇಳಿದ್ದಾನೆ.
ಬೆದರಿಕೆ ಕರೆ ಬರುತ್ತಿದ್ದಂತೆ ಮೈಸೂರು ರೈಲ್ವೆ ನಿಲ್ದಾಣದ ಪೋಲೀಸರು, ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ರೈಲ್ವೆ ಫ್ಲಾಟ್ಫಾರಂ ಹಾಗೂ ರೈಲುಗಳನ್ನು ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಮಾಹಿತಿ ಲಭ್ಯವಾಗಬೇಕಿದೆ.