ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಏಳನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ, ತಮಿಳುನಾಡು ಪೊಲೀಸರ ಸಹಾಯದಿಂದ ಮೈಸೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ತಮಿಳುನಾಡಿನಿಂದ ಇಂದು ಮೈಸೂರಿಗೆ ಕರೆತರಲಾಗುವುದು.
ಘಟನೆ ನಂತರದ ನಾಲ್ಕು ದಿನಗಳಲ್ಲಿ ಐವರನ್ನು ಬಂಧಿಸಲಾಗಿತ್ತು. ಆರೋಪಿಗಳು ತಾವು ಏಳು ಮಂದಿ ಇದ್ದುದ್ದಾಗಿ ಹೇಳಿದ್ದು, ತೀವ್ರ ಶೋಧದ ನಂತರ ಆರನೇ ಆರೋಪಿ ಸಿಕ್ಕಿಬಿದ್ದಿದ್ದ. ಆದರೆ ಏಳನೇ ಆರೋಪಿ ಪೊಲಿಸರಿಂದ ತಲೆಮರೆಸಿಕೊಂಡಿದ್ದ. ಇದೀಗ ಕಾರ್ಯಾಚರಣೆ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಕಸ್ಟಡಿಯಲ್ಲಿದ್ದ ಆರೋಪಿಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.