ಮೈಸೂರಿನಲ್ಲಿ ನಾಳೆ ಕಂದಾಯ ಇಲಾಖೆಯ ಬೃಹತ್ ಕಡತ ವಿಲೇವಾರಿ ಕಾರ್ಯಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಸುಮಾರು 15-20 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡಿ ಜನತೆಗೆ ಅನುಕೂಲ ಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ನಾಳೆ ಮೈಸೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಪ್ರಾರಂಭಿಸಲಿದ್ದಾರೆ.

ಕಡತಗಳು ಕೇವಲ ಕಾಗದ ಅಲ್ಲ. ಅದರಲ್ಲಿ ಜನರ ಹಿತ, ಭಾವನೆ ಅಡಕವಾಗಿದೆ ಎನ್ನುವುದು ನನ್ನ ಅಭಿಪ್ರಾಯ. ನಾನಾ ಕಾರಣಗಳಿಂದ ಇತ್ಯರ್ಥ ಆಗದೆ ಇದ್ದ ಹಳೆಯ ಕಡತಗಳನ್ನು 10 ದಿನಗಳ ಕಾಲ ನಡೆಯುವ ಈ ಅಭಿಯಾನದಲ್ಲಿ ತೀರ್ಮಾನ ಮಾಡಬೇಕು. ಜನರ ಅಲೆದಾಟ ತಪ್ಪಿಸಬೇಕು. ಪ್ರಾಯೋಗಿಕವಾಗಿ ನಾಳೆ ಮೈಸೂರಿನಲ್ಲಿ ಇದನ್ನು ಪ್ರಾರಂಭಿಸುತ್ತಿದ್ದೇನೆ. ನಂತರ ರಾಜ್ಯಾದ್ಯಂತ ಈ ಅಭಿಯಾನವನ್ನು ಕಂದಾಯ ಇಲಾಖೆ ಹಮ್ಮಿಕೊಳ್ಳಲಿದೆ. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿಯೂ ಕಡತಗಳ ಸಮಸ್ಯೆ ಅರಿವಾಗಿತ್ತು. ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ಈ ಅಭಿಯಾನ ನಡೆಯಲಿದೆ. ಉಪವಿಭಾಗಾಧಿಕಾರಿಗಳು, ತಹಶಿಲ್ದಾರರು ಇದರ ನೇತೃತ್ವ ವಹಿಸಲಿದ್ದಾರೆ. ಕಂದಾಯ ಇಲಾಖೆ ಎಲ್ಲ ಅಧಿಕಾರಿಗಳು ಈ ಅಭಿಯಾನದಲ್ಲಿ ಕೆಲಸ ಮಾಡುತ್ತಾರೆ. ಕಂದಾಯ ಇಲಾಖೆಗೆ ಹೊಸ ದಿಕ್ಕನ್ನು ನೀಡಬೇಕು. ಕಂದಾಯ ಇಲಾಖೆ ಜನಸ್ನೇಹಿ ಇಲಾಖೆ ಆಗಿರಬೇಕೆಂಬುದು ನನ್ನ ಆಶಯ ಎಂದು ಆರ್. ಅಶೋಕ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!