ಹೊಸ ದಿಗಂತ ವರದಿ, ಮೈಸೂರು:
ಜಿಲ್ಲೆಯ ನಂಜನಗೂಡಿನ ಜುಬಿಲೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಕಾರ್ಖಾನೆಯ ಫ್ಲಾಟ್ 1ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರವಾರ ಮೂಲದ ಕಾರ್ಮಿಕ ಶಿವಾನಂದ (49) ಮೃತ ದುರ್ದೆÊವಿ. ಕಾರ್ಖಾನೆಯಲ್ಲಿ ಹಲವಾರು ವರ್ಷಗಳಿಂದ ಶಿವಾನಂದ ಖಾಯಂ ನೌಕರನಾಗಿ ಕಾರ್ಯ ನಿರ್ವಹಿಸುತ್ತಿದ್ದನು. ಇಂದು ಅನುಮಾನಾಸ್ಪದ ರೀತಿಯಲ್ಲಿ ಕಾರ್ಖಾನೆಯಲ್ಲಿಯೇ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಮಿಕನ ಶವವನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
- Advertisement -