ಮೈಸೂರು| ಮೊಬೈಲ್ ಅಂಗಡಿಗೆ ನುಗ್ಗಿ ಕಳ್ಳತನ

ಹೊಸ ದಿಗಂತ ವರದಿ, ಮೈಸೂರು:

ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳನೊಬ್ಬ ಹಣ, ಬೆಲೆ ಬಾಳುವ ಮೊಬೈಲ್‌ಗಳನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಬುಧವಾರ ಮಧ್ಯರಾತ್ರಿ ವಿದ್ಯಾರಣ್ಯಪುರಂನಲ್ಲಿರುವ ಮಾರುತಿ ಇನ್ಫೋಟೆಕ್ ಮೊಬೈಲ್ ಅಂಗಡಿಗೆ ನುಗ್ಗಿದ ಖದೀಮ ಹಣ, ಬೆಲೆ ಬಾಳುವ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬoಧ ಅಂಗಡಿ ಮಾಲೀಕ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!