ಮೈಸೂರು ವಿಶ್ವವಿದ್ಯಾನಿಲಯ ವತಿಯಿಂದ ಬಿ.ಇಡಿ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ

ಹೊಸದಿಗಂತ ವರದಿ, ಮೈಸೂರು:

ಮೈಸೂರು ವಿಶ್ವವಿದ್ಯಾನಿಲಯ ವತಿಯಿಂದ ಜನವರಿ-2022ರಲ್ಲಿ ನಡೆದ ಬಿ.ಇಡಿ ಪದವಿ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲಾಗಿದೆ.
ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಮರುಮೌಲ್ಯಮಾಪನ ಬೇಕಾದರೆ ಅಥವಾ ಉತ್ತರ ಪತ್ರಿಕೆಯ ನಕಲು ಪ್ರತಿ ಅಗತ್ಯವಿದ್ತರೆ ಅಥವಾ ಉತ್ತರ ಪತ್ರಿಕೆ ವೀಕ್ಷಣೆ ಹಾಗೂ ಮರುಸಂಕಲನದ ಬಗ್ಗೆ ಈ ಕೆಳಕಂಡAತೆ ದಿನಾಂಕಗಳನ್ನು ನಿಗದಿಪಡಿಸಿದೆ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಪಿ.ಜ್ಞಾನಪ್ರಕಾಶ್ ತಿಳಿಸಿದ್ದಾರೆ.
ಮರುಮೌಲ್ಯಮಾಪನ ಉತ್ತರ ಪತ್ರಿಕೆಯ ನಕಲು ಪ್ರತಿ/ಉತ್ತರ ಪತ್ರಿಕೆ ವೀಕ್ಷಣೆ ಮಾಡಲು, ಮರುಸಂಕಲನದ ಬಗ್ಗೆ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಶುಲ್ಕ ಪಾವತಿಮಾಡಿ ಅರ್ಜಿಗಳನ್ನು ಅಪ್‌ಲೋಡ್ ಮಾಡಲು ಫೆ.16 ಕೊನೆಯ ದಿನ ಆಗಿದೆ.
ಅಂತೆಯೇ ಉತ್ತರ ಪತ್ರಿಕೆಗಳನ್ನು ವೀಕ್ಷಿಸಲು ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವ ದಿನಾಂಕ ಫೆ.21.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2419407/416 ಅನ್ನು ಸಂಪರ್ಕಿಸುವುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!