ಜಮ್ಮು ಕಾಶ್ಮೀರದ ಉಧಂಪುರದಲ್ಲಿ ನಿಗೂಢ ಸ್ಫೋಟ: ಒಬ್ಬರ ಸಾವು, 13 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಉಧಂಪುರದ ಸ್ಲಾಥಿಯಾ ಚೌಕ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಗೂಢ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಬಗ್ಗೆ ಸಚಿವ ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದು, ಉಧಮ್‌ಪುರದ ತಹಸೀಲ್ದಾರ ಕಚೇರಿ ಬಳಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!