ಧರ್ಮಸ್ಥಳ ಮೂಲದ ಏರೋಸ್ಪೇಸ್‌ ಇಂಜಿನಿಯರ್‌ ನಿಗೂಢ ಸಾವು ಕೇಸ್‌, ಕಡೆಗೂ ಕಾರಣ ಬಹಿರಂಗ!!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಧರ್ಮಸ್ಥಳ  ಮೂಲದ ಏರೋಸ್ಪೆಸ್ ಎಂಜಿನಿಯರ್  ಪಂಜಾಬ್ ಕಾಲೇಜಿನಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಪ್ರಕರಣಕ್ಕೆ ಕಡೆಗೂ ಕಾರಣ ದೊರಕಿದೆ.

ಯುವತಿ ಆಕಾಂಕ್ಷಾ ನಾಯರ್ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.‌ ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದರು.

Aerospace Engineer Died In Punjab 1ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಆಕಾಂಕ್ಷ ಪೋಷಕರು ಕಾಲೇಜಿನವರೇ ನನ್ನ ಮಗಳಿಗೆ ಏನೋ ಮಾಡಿದ್ದಾರೆ, ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಹುಡುಗಿಯಲ್ಲ ಎಂದು ಆರೋಪಿಸಿದ್ದರು. ಆದರೆ ಅಸಲಿ ವಿಚಾರ ಈಗ ಹೊರಬಿದ್ದಿದೆ. ಆಕಾಂಕ್ಷ ಪ್ರೀತಿಯಲ್ಲಿ ಬಿದ್ದಿದ್ದರು. ಅದು ಕೂಡ ಎರಡು ಮಕ್ಕಳ ತಂದೆಯ ಜೊತೆ!

ಹೌದು, ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಜೊತೆ ಪ್ರೇಮವಾಗಿತ್ತು. ಕೇರಳದ ಕೊಟ್ಟಾಯಂ ನಿವಾಸಿ ಬಿಜಿಲ್ ಮ್ಯಾಥ್ಯೂ ಜೊತೆ ಆಕಾಂಕ್ಷ ರಿಲೇಷನ್‌ಶಿಪ್‌ನಲ್ಲಿದ್ದರು. ಅಲ್ಲದೇ ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದಳು. ಮ್ಯಾಥ್ಯೂ ಹೆಂಡತಿ, ಮಕ್ಕಳ ಎದುರು ಆಕಾಂಕ್ಷ ತನ್ನನ್ನು ಮದುವೆಯಾಗುವಂತೆ ಕೇಳಿದ್ದರು. ಈ ಜಗಳದ ನಂತರ ಮ್ಯಾಥ್ಯೂ ಕಾಲೇಜಿಗೆ ಬಂದಿದ್ದರು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮ್ಯಾಥ್ಯೂ ವಿರುದ್ದ ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇಂದು ಶವಪರೀಕ್ಷೆ ಬಳಿಕ ಹೆತ್ತವರಿಗೆ ಆಕಾಂಕ್ಷಳ ಮೃತದೇಹ ಹಸ್ತಾಂತರಿಸಲಾಗುತ್ತದೆ. ಇಂದು ಸಂಜೆ ವೇಳೆಗೆ ಧರ್ಮಸ್ಥಳ ಬೊಳಿಯೂರು ಮನೆಯಲ್ಲಿ ಆಕಾಂಕ್ಷ ಅಂತ್ಯಸಂಸ್ಕಾರ ನಡೆಯಲಿದೆ.‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!