ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿವೆ.
ಸದ್ಯ ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ಕಾರಣವೇನು ಎಂಬುವುದು ತಿಳಿಯಲಿದೆ. ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನುಗಳಲ್ಲಿ 5 ಗಂಡು ಹಾಗೂ 14 ಹೆಣ್ಣು ಸೇರಿ ಒಟ್ಟು 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವುದು ಪತ್ತೆ ಆಗಿದೆ.
ಬೆಳಗ್ಗೆ ರೈತರು ಜಮೀನಿಗೆ ಬಂದಾಗ ನವಿಲುಗಳ ಮೃತದೇಹಗಳು ಪತ್ತೆ ಆಗಿವೆ. ಆಗಸ್ಟ್ 1ರ ರಾತ್ರಿ ನವಿಲುಗಳು ಮೃತಪಟ್ಟ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.ಇನ್ನು ನವಿಲುಗಳ ಸಾವಿಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಬೆಳೆಗಳನ್ನು ಸೇವಿಸಿ ಮೃತಪಟ್ಟಿರಬಹುದು ಅಥವಾ ಯಾರಾದರೂ ಏನಾದರೂ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.