ಬಿಜೆಪಿ ಶಾಸಕನ ನಿವಾಸದಲ್ಲೇ ಕಾರು ಚಾಲಕನ ನಿಗೂಢ ಸಾವು, ಏನಿದು ಪ್ರಕರಣ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸುನಿಲ್ ಲಮಾಣಿ ​(25) ಆತ್ಮಹತ್ಯೆಗೆ ಶರಣಾದ ಚಾಲಕ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಶಾಸಕ ಚಂದ್ರು ಲಮಾಣಿ ಅವರು ಇತ್ತೀಚೆಗೆ ಖರೀದಿಸಿದ್ದ ನಿವಾಸದಲ್ಲೇ ಸುನಿಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ಜು ಮೃತ ಸುನಿಲ್‌ ಅವರು ಶಾಸಕ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾವುದೇ ಡೆತ್‌ನೋಟ್‌ ಸಹ ಸಿಕ್ಕಿಲ್ಲ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.  ಮನೆ ಕಟ್ಟುವ ವಿಷಯದಲ್ಲಿ ಸಹೋದರರ ನಡುವೆ ಕಲಹವಾಗಿದ್ದು, ಈ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!