Tuesday, September 30, 2025

SHOCKING | ಮನೆಯಲ್ಲಿ ನಿಗೂಢ ಸ್ಫೋಟ: ದಂಪತಿಗೆ ಗಂಭೀರ ಗಾಯ, ಝೀರೋ ಟ್ರಾಫಿಕ್‍ನಲ್ಲಿ ಆಸ್ಪತ್ರೆಗೆ ಶಿಫ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ದಂಪತಿಯನ್ನು ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಎಂದು ಗುರುತಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್‍ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ನಿಗೂಢ ಸ್ಪೋಟದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.