ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ನಿಗೂಢ ವಸ್ತು ಸ್ಪೋಟಗೊಂಡಿದ್ದು, ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 7ರ ರಾತ್ರಿ 11.30ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮೂವರು ಕೂಲಿ ಕಾರ್ಮಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಶ್ರೀನಿವಾಸ್, ಮಣಿಕಂಠ, ಶಶಿಕುಮಾರ್ ಎಂಬುವವರು ಸ್ಫೋಟದಲ್ಲಿ ಗಾಯಕ್ಕೊಳಗಾದವರು, ಇವರಲ್ಲಿ ಇಬ್ಬರು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಸದ್ಯ ಘಟನೆಯಲ್ಲಿ ಗಾಯಗೊಂಡ ಶ್ರೀನಿವಾಸ್, ಮಣಿಕಂಠನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳು ಶ್ರೀನಿವಾಸ್ ಪತ್ನಿ ಕಲ್ಯಾಣಿ ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಅನ್ವಯ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.