ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳೆ ಆಲೂರು ಗ್ರಾಮದ ಮನೆಯೊಂದರಲ್ಲಿ ನಿಗೂಢ ಸ್ಫೋಟದಿಂದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಇಂದು ಹಾಸನದ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಲಾಗಿದೆ. ಈಗಾಗಲೇ ಸ್ಥಳಕ್ಕೆ ಎಫ್.ಎಸ್.ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಫೋಟಕಕ್ಕೆ ಕಾರಣವಾದ ವಸ್ತು ಏನು ಎಂಬುದರ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮುಹಮ್ಮದ್ ಸುಜಿತಾ ತಿಳಿಸಿದ್ದಾರೆ. ಸ್ಥಳದಲ್ಲಿ ಸಿಕ್ಕ ರಾಸಾಯನಿಕ ಮೆಟಲ್ ಮತ್ತು ಕಾರ್ಪೆಂಟರ್ ವಸ್ತುಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಿಗೂಢ ಸ್ಫೋಟ: ಇಬ್ಬರು ಗಂಭೀರ ಗಾಯ, ಸ್ಥಳಕ್ಕೆ ಪೋಲೀಸರ ದೌಡು
