ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಮೊರೆನಾ ನಗರದ ರಾಥೋಡ್ ಕಾಲೋನಿಯಲ್ಲಿ ಸೋಮವಾರ ಮಧ್ಯರಾತ್ರಿಯ ಸುಮಾರಿಗೆ ನಿಗೂಢ ಸ್ಫೋಟ ಸಂಭವಿಸಿದ್ದು ಮೂರು ಮನೆಗಳು ಕುಸಿದಿವೆ. ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಫೋಟದ ಸ್ಥಳಕ್ಕೆ ಫೊರೆನ್ಸಿಕ್ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಹೇಳಿದ್ದಾರೆ.