ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಊಟಿಯಲ್ಲಿ ಗುರುವಾರ ಕಾರು ಅಪಘಾತ ಸಂಭವಿಸಿದ್ದು, ಮೈಸೂರಿನ ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೈಸೂರಿನ ಎನ್.ಆರ್. ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿರುವ ಸ್ವಾಮಿಗೌಡ ಅವರು ನಿನ್ನೆ ಸಂಜೆ ಸ್ನೇಹಿತರ ಜೊತೆಗೆ ಊಟಿ ಪ್ರವಾಸ ಮುಗಿಸಿಕೊಂಡು ಮೈಸೂರಿಗೆ ತೆರಳುತ್ತಿದ್ದ ವೇಳೆ ಕೂಡ್ಲೂರು ಬಳಿ ಇವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸ್ವಾಮಿಗೌಡ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸ್ವಾಮಿಗೌಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಮಿಳುನಾಡಿನ ಊಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.