ನಾಡಹಬ್ಬ ಮೈಸೂರು ದಸರಾ: ಇಂದಿನಿಂದ ಗಜಪಡೆಯ ನಡಿಗೆ ತಾಲೀಮು ಆರಂಭ

ಹೊಸದಿಗಂತ ವರದಿ ಮೈಸೂರು: 

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಭಾನುವಾರದಿಂದ ದಸರಾ ಗಜಪಡೆಗೆ ತಾಲೀಮು ಆರಂಭಿಸಲಾಯಿತು. ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗಿತ್ತು. ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ಸರ್ಕಲ್, ಬಂಬೂಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ. ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಈ ವೇಳೆ ಡಿಸಿಎಫ್ ಕರಿಕಾಳನ್ ಮಾತನಾಡಿ, ದಸರಾ ಮಹೋತ್ಸವ ಹಿನ್ನಲೆಯಲ್ಲಿ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ. ಆನೆಗಳನ್ನು ತೂಕ ಮಾಡಲಾಗಿದೆ, ಎಲ್ಲ ಆನೆಗಳು ಅರೋಗ್ಯವಾಗಿದೆ ಮತ್ತೊಂದು ವಿಶೇಷವೆನೆಂದರೆ ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ. ಒಂದು ವಾರದ ನಂತರ ಭಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!