Monday, November 10, 2025

ಶಿಕ್ಷಣ ಸೂಚ್ಯಂಕದಲ್ಲಿ 7ರಿಂದ 14ನೇ ಸ್ಥಾನಕ್ಕೆ ಕುಸಿದ ಮೈಸೂರು: ಸಿಎಂ ಅಸಮಾಧಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ 7ನೇ ಸ್ಥಾನದಿಂದ 14ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದು ಇಲ್ಲಿನ ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಹೇಗಿದೆ ಎಂಬುದನ್ನು ತೋರಿಸುತ್ತದೆ. ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಇಲ್ಲಿಯೇ ಶಿಕ್ಷಣ ಸೂಚ್ಯಂಕದಲ್ಲಿ ಕುಸಿದಿರುವುದು ಸರಿಯಲ್ಲ. ಈ ಪರಿಸ್ಥಿತಿ ಸುಧಾರಿಸಬೇಕು ಎಂದು ಹೇಳಿದರು.

ಜನರನ್ನು ಅವರ ಕೆಲಸಗಳಿಗಾಗಿ ಅನಗತ್ಯ ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಇದು ಅಕ್ಷಮ್ಯ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಜನರನ್ನು ಅಲೆದಾಡಿಸಬಾರದು. ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಬರುವವರು, ಅಧಿಕಾರಿಗಳು ಶಾಶ್ವತವಾಗಿ ಇರುವವರು ಎನ್ನುವ ಭಾವನೆ ಬಿಟ್ಟು ಕೆಲಸ ಮಾಡಬೇಕು. ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು ಎನ್ನುವ ಸೂಚನೆ ನೀಡಿದ್ದೆ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳು ವರದಿ ನೀಡಬೇಕೆಂದು ತಿಳಿಸಿದರು.

error: Content is protected !!