ಹೊಸದಿಗಂತ ಡಿಜಿಟಲ್ ಡೆಸ್ಕ್
ಮಣಿಪುರ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಎನ್.ಬಿರೇನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಎಲ್. ಗಣೇಶನ್ ಅವರು ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವಾರು ಹಿರಿಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಿರಣ್ ರಿಜಿಜು ಅವರು ಪಕ್ಷದ ಪರವಾಗಿ ರಾಜ್ಯಪಾಲರಿಗೆ ಪತ್ರ ಬರೆದು, ಎನ್ ಬಿರೇನ್ ಸಿಂಗ್ ಅವರನ್ನು 32 ಶಾಸಕರೊಂದಿಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮಣಿಪುರದಲ್ಲಿ, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ 60 ಸದಸ್ಯರ ಸದನದಲ್ಲಿ ಬಿಜೆಪಿ 32 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಮರಳಿದೆ.