ಜಮ್ಮು ಕಾಶ್ಮೀರದಲ್ಲಿ ಎನ್​ಕೌಂಟರ್​: ಯೋಧರ ಗುಂಡೇಟಿಗೆ ಇಬ್ಬರು ಉಗ್ರರ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು-ಕಾಶ್ಮೀರದ ಅನಂತ್​ನಾಗ ಜಿಲ್ಲೆಯ ಶಿತಿಪೋರಾದ ಬಿಜ್​ಬೇರಾ ಎಂಬಲ್ಲಿ ಎನ್​ಕೌಂಟರ್ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಸಮೀಪದ ನಾಜಿಭಟ್​ ಪ್ರದೇಶದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರ ಹತ್ಯೆ ಮಾಡುವಲ್ಲಿ ಸೇನೆ ಯಶಸ್ವಿಯಾಗಿತ್ತು.
ಉಗ್ರರ ಉಪಸ್ಥಿತಿಯ ಬಗ್ಗೆ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!