ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಶ್ರೀನಗರದ ದನ್ಮಾರ್ ಪ್ರದೇಶದ ಆಲಂದಾರ್ ಕಾಲೋನಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಹತ ಉಗ್ರರ ಗುರುತು ಹಾಗೂ ಯಾವ ಸಂಘಟನೆಗೆ ಸೇರಿದ್ದಾರೆ ಎಂಬುದರ ಕುರಿತು ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪೊಲೀಸರ್ ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ, ಶ್ರೀನಗರ್ ದನ್ಮರ್ ಪ್ರದೇಶ ಮತ್ತು ಸಾಫಕಾದಲ್-ಸೌರಾ ರಸ್ತೆಯ ಸುತ್ತಮುತ್ತಲಿನ ಮನೆಗಳಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಭದ್ರತಾ ಪಡೆ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ ಹಿನ್ನೆಲೆ ಭದ್ರತಾ ಪಡೆಯು ಎನ್ ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿಸಿದ್ದಾರೆ.