ಗುಜರಾತ್ ಚುನಾವಣೆ: ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ, ಮತದಾರರಿಗೆ ಮೋದಿ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ, ವಿಶೇಷವಾಗಿ ಮೊದಲ ಬಾರಿಗೆ ಮತ ಚಲಾಯಿಸುವವರು ತಮ್ಮ ಹಕ್ಕು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಕರೆ ನೀಡಿದರು.

“ಇಂದು ಗುಜರಾತ್ ಚುನಾವಣೆಯ ಮೊದಲ ಹಂತವಾಗಿದೆ. ಇಂದು ಮತದಾನ ಮಾಡುವ ಎಲ್ಲರಿಗೂ, ವಿಶೇಷವಾಗಿ ಮೊದಲ ಬಾರಿಗೆ ಮತದಾರರು ತಮ್ಮ ಹಕ್ಕುಗಳನ್ನು ದಾಖಲೆ ಸಂಖ್ಯೆಯಲ್ಲಿ ಚಲಾಯಿಸಲು ನಾನು ಕರೆ ನೀಡುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಬೆಳಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಆರಂಭವಾಯಿತು. ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನ 19 ಜಿಲ್ಲೆಗಳಲ್ಲಿ 89 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಇಂದು ಸಂಜೆ 5 ಗಂಟೆಯೊಳಗೆ ಒಟ್ಟು 2,39,76,670 ಮತದಾರರು ಮತದಾನ ಮಾಡಲಿದ್ದು, ಮೊದಲ ಹಂತದ ಚುನಾವಣಾ ಕಣದಲ್ಲಿರುವ 788 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!