ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ಕಾರಣಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.
ನಾಳೆ ಬೆಳಗ್ಗೆ ದೆಹಲಿಯಲ್ಲಿ ನಡೆಯಲಿರುವ ನಂದಿನಿ ಉತ್ಪನ್ನ ಬಿಡುಗಡೆ ಸಮಾರಂಭದಲ್ಲಿ ಅವರು ಭಾಗವಹಿಸುವುದು ಮೊದಲ ಕಾರಣ ಮತ್ತು ನಬಾರ್ಡ್ ನಿಂದ ರಾಜ್ಯಕ್ಕೆ ಸಿಗುತ್ತಿದ್ದ ಸಾಲದ ಮೊತ್ತವನ್ನು ಶೇಕಡ 58ರಷ್ಟು ಕಡಿಮೆ ಮಾಡಿರುವುದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸುವುದು ಎರಡನೇ ಕಾರಣವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡನ್ನೂ ಭೇಟಿಯಾಗುವರೇ? ನಾಳೆಯೇ ಬೆಂಗಳೂರಿಗೆ ವಾಪಸ್ಸು ಬರಬೇಕಿರುವುದರಿಂದ ವರಿಷ್ಠರನ್ನು ಭೇಟಿಯಾಗುವುದು ಸಾಧ್ಯವಾಗಲಾರದು, ಆದರೆ ಸಮಯ ಸಿಕ್ಕರೆ ಅವರನ್ನು ಭೇಟಿಯಾಗುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.