ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ಮೈಸೂರು ದಸರಾವನ್ನು ಜನರ ಉತ್ಸವವಾಗಿ ಆಚರಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ನಾಡಹಬ್ಬ ದಸರಾ ಉತ್ಸವಕ್ಕೆ ಅಕ್ಟೋಬರ್ 3ರಂದು ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ.
ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.