Sunday, October 1, 2023

Latest Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವೇಳಾಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2023 ರ (Mysore Dasara Mahotsav 2023) ಕೆ ಭರದ ಸಿದ್ದತೆಗಳು ನಡೆಯುತ್ತಿದ್ದು, ಇದರ ನಡುವೆ ನವರಾತ್ರಿ ಆಚರಣೆಯ (Navratri celebration) ವೇಳಾಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

ಅಕ್ಟೋಬರ್‌ 15 ಭಾನುವಾರ ಶರನ್ನವರಾತ್ರಿ ಪ್ರಾರಂಭವಾಗಲಿದೆ. ಅಂದು ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಬೆಳಗ್ಗೆ 10.15ರಿಂದ ಬೆಳಗ್ಗೆ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಂಜೆ 6.30ರಿಂದ ಅರಮನೆ ಪೂಜೆಗಳು ಆರಂಭಗೊಳ್ಳಲಿವೆ.

15-10-2023 ಸಾಯಂಕಾಲ 6.30 ರಿಂದ 7.15 ರ ಶುಭಮೇಷ ಲಗ್ನದಲ್ಲಿ ಅರಮನೆಯಲ್ಲಿನ ಪೂಜೆಗಳು ಆರಂಭವಾಗಲಿವೆ.
20-10-2023 ಶುಕ್ರವಾರ; ಕಾತ್ಯಾಯಿನೀ – ಸರಸ್ವತಿ ಪೂಜೆ ನಡೆಯಲಿದೆ.
21-10-2023 ಶನಿವಾರ: ಕಾಳರಾತ್ರಿ, ಮಹಿಷಾಸುರ ಸಂಹಾರ ನಡೆಯಲಿದೆ.
23-10-2023 ಸೋಮವಾರ: ಆಯುಧ ಪೂಜೆ ನಡೆಯಲಿದೆ.
24-10-2023 ಮಂಗಳವಾರ: ವಿಜಯದಶಮಿ ಆಚರಣೆ ನಡೆಯಲಿದೆ.
ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಮುಖ್ಯಮಂತ್ರಿಯವರು ನಂದೀ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 4.40 ರಿಂದ 5.00ರ ಶುಭ ಮೀನ ಲಗ್ನದಲ್ಲಿ ಮಾನ್ಯ ಮುಖ್ಯಮಂತ್ರಿಯವರಿಂದ ಮತ್ತು ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ ನಡೆಯಲಿದೆ. ನಂತರ ವಿಶ್ವವಿಖ್ಯಾತ ಜಂಬೂ ಸವಾರಿ ಪ್ರಾರಂಭವಾಗಲಿದೆ.
26-10-2023 ಭಾನುವಾರ: ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ.

ಈ ಬಾರಿಯ ಮೈಸೂರು ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಘೋಷಣೆ ಮಾಡಿದ್ದಾರೆ. ಅತ್ತ ಗಜಪಡೆಯೂ ತಾಲೀಮು ನಡೆಸುತ್ತಿದ್ದು, ಜಂಬೂ ಸವಾರಿಗೆ ಹಲವು ಬಾರಿ ರಿಹರ್ಸಲ್ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!