ನಡ್ಡಾ, ವಿಜಯೇಂದ್ರಗೆ ಪೊಲೀಸರಿಂದ ಸಮನ್ಸ್‌, 7 ದಿನಗಳ ಒಳಗೆ ವಿಚಾರಣೆಗೆ ಹಾಜರಾಗಲು ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಪೊಲೀಸರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಪಕ್ಷದ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ ಸಮನ್ಸ್ ನೀಡಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಆದೇಶಿಸಲಾಗಿದೆ. ಸೂಚನೆಯನ್ನು ಸ್ವೀಕರಿಸಿದ ಏಳು ದಿನಗಳಲ್ಲಿ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

ಮೂವರು ಬಿಜೆಪಿ ನಾಯಕರ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋಗೆ ಕಾಂಗ್ರೆಸ್‌ ನಾಯಕ ರಮೇಶ್‌ ಬಾಬು ಅವರು ಮೇ 4 ರಂದು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!