ನಾಡಹಬ್ಬ ದಸರಾ ಗಜಪಯಣಕ್ಕೆ ಚಾಲನೆ: ಮಂಗಳವಾದ್ಯದ ಜೊತೆಗೂಡಿ ಸಾಗಿದ ಗಜಪಡೆ

ಹೊಸದಿಗಂತ ವರದಿ ಮೈಸೂರು:

ನಾಡಹಬ್ಬ ಮೈಸೂರು ದಸರಾಗೆ ಮುನ್ನುಡಿಯಾ ಗಜಪಯಣಕ್ಕೆ ಭಾನುವಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಚಾಲನೆ ನೀಡಿದರು. ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು.

       

ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆಹಾಕಿದವು.

   

 

ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಗಜಪಯಣಕ್ಕೆ ಇಂದು ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಆ.10ರಂದು ಅರಮನೆಗೆ ಗಜಪಡೆಯ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಯನ್ನು ಬರಮಾಡಿಕೊಳ್ಳಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!