Friday, December 8, 2023

Latest Posts

ನಟಿ ಶೋಭಿತಾ ಜೊತೆ ನಾಗಚೈತನ್ಯ ಡೇಟಿಂಗ್?: ವೈರಲ್ ಆಯಿತು ಫೋಟೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟಿ ಸಮಂತಾ ಮಾಜಿ ಪತಿ ನಾಗಚೈತನ್ಯ ಇದೀಗ ಡೇಟಿಂಗ್ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ.
ಸಮಂತಾ ಅವರಿಂದ ವಿಚ್ಛೇದನ ಪಡೆದ ಬಳಿಕ ನಾಗ ಚೈತನ್ಯ ಮತ್ತೋರ್ವ ನಟಿಯ ಜೊತೆ ಪ್ರೀತಿಯಲ್ಲಿ ಬಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ತಿಂಗಳಿಂದ ಹರಿದಾಡುತ್ತಿದೆ, ಇದೀಗ
ಈ ಡೇಟಿಂಗ್ ವಿಚಾರಕ್ಕೆ ಪುಷ್ಠಿ ನೀಡುವಂತೆ ನಟಿ ಶೋಭಿತಾ ಜೊತೆ ಇರುವ ಫೋಟೋ ವೈರಲ್ ಆಗಿದೆ.
ಇಬ್ಬರೂ ಉದ್ದ ಜಾಕೆಟ್ ಹಾಕಿ ಕ್ಯಾಮರಾ ಮುಂದೆ ಪೋಸ್ ನೀಡಿದ್ದಾರೆ. ಅಂದಹಾಗೆ ಈ ಫೋಟೋಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ.ಅನೇಕರು ಈ ಫೋಟೋ ಫೇಕ್ ಎಂದು ಹೇಳುತ್ತಿದ್ದಾರೆ. ಇನ್ನು ಅನೇಕರು ಇಬ್ಬರ ಡೇಟಿಂಗ್ ರೂಮರ್ ನಿಜ ಎಂದು ಹೇಳುತ್ತಿದ್ದಾರೆ. ಶೋಭಿತಾ ಕಾರಣಕ್ಕೆ ನಾಗಚೈತನ್ಯ ಸಮಂತಾ ಅವರಿಂದ ದೂರ ಆದರು ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಸಮಂತಾ ಅವರಿಗೆ ಅನ್ಯಾಯವಾಗಿದೆ ಎಂದು ಅಭಿಮಾನಿಗಳು ಬೇಸರ ಹೊರಹೊಕುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!