ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ ನಟ ನಾಗಚೈತನ್ಯ ಮತ್ತು ಸೋಭಿತಾ ಧುಲಿಪಾಲ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಡಿ.4ರಂದು ನಾಗಚೈತನ್ಯ ಮದುವೆ ಡೇಟ್ ನಿಗದಿಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ.
ಸಮಂತಾ ಮಾಜಿ ಪತಿ ನಾಗಚೈತನ್ಯ ಅವರು ಶೋಭಿತಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇದೇ ಡಿಸೆಂಬರ್ 4ರಂದು ಬಂಜಾರಾ ಹಿಲ್ಸ್ನಲ್ಲಿರುವ ಅನುಪಮಾ ಸ್ಟುಡಿಯೋದಲ್ಲಿ ಮದುವೆಯಾಗುತ್ತಿದ್ದಾರೆ. ಇದು ನಾಗಾರ್ಜುನ ಅಕ್ಕಿನೇನಿ ಅವರ ಒಡೆತನದಲ್ಲಿದೆ. ಈ ಮದುವೆಗೆ ಸೆಲೆಬ್ರಿಟಿಗಳು, ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ.