ನಾಗಾಲ್ಯಾಂಡ್‌ನ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ: 6 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಗಾಲ್ಯಾಂಡ್‌ನ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ 6 ಮಂದಿ ಸಜೀವ ದಹನವಾಗಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವೊಖಾ ಜಿಲ್ಲೆಯ ಭಂಡಾರಿ ಉಪ ವಿಭಾಗದ ರಿಚನ್ಯಾನ್ ಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಭಂಡಾರಿ ಕ್ಷೇತ್ರದ ಶಾಸಕ ಅಚುಂಬೆಮೊ ಕಿಕೊನ್ ಹೇಳಿದ್ದಾರೆ.

ಮೃತರೆಲ್ಲರೂ ಅಸ್ಸಾಂ ಮೂಲದವರಾಗಿದ್ದು, ಅಕ್ರಮವಾಗಿ ರ್‍ಯಾಟ್ ಹೋಲ್ ಮೈನಿಂಗ್ ನಡೆಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಮೃತರನ್ನು ದಿಮಪುರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ರಮ ಕಲ್ಲಿದ್ದಲು ಗಣಿಯಾಗಿದ್ದು, ಅಂತಹ ಗಣಿಗಾರಿಕೆಯನ್ನು ತಡೆಯಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಗಣಿ ಇಲಾಖೆಯನ್ನು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!