ನಾಗಾಲ್ಯಾಂಡ್ ಚುನಾವಣೆ: 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾಗಾಲ್ಯಾಂಡ್ ಚುನಾವಣೆಗೆ ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. 21 ಅಭ್ಯರ್ಥಿಗಳ ಪೈಕಿ ಓರ್ವ ಮಹಿಳಾ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ನಾಗಾಲಾಂಡ್‌ನಲ್ಲಿ ನಾಗಾ ಪೀಪಲ್ ಫ್ರಂಟ್ ಹಾಗೂ ಬಿಜೆಪಿ ಮೈತ್ರಿಯ ಡೆಮಾಕ್ರಟಿಕ್ ಅಲಯನ್ಸ್ ಆಫ್ ನಾಗಾಲಾಂಡ್ ಸರ್ಕಾರ ರಚಿಸಿದೆ. ಈ ಬಾರಿ ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಅಧಿಕಾರ ಪಡೆಯಲು ಶತ ಪ್ರಯತ್ನ ಮಾಡುತ್ತಿದೆ. ಇತ್ತೀಚಿನ ಸರ್ವೆಗಳಲ್ಲಿ ಬಿಜೆಪಿ ಮೈತ್ರಿ ಪಕ್ಷಕ್ಕೆ ಗೆಲುವಾಗಲಿದದೆ ಎಂದಿದೆ.

ಫೆಬ್ರವರಿ 27ಕ್ಕೆ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾರ್ಚ್ 2ಕ್ಕೆ ಫಲಿತಾಂಶ ಹೊರಬೀಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!