ಹೊತ್ತಿ ಉರಿದ ನಾಗಮಂಗಲ: ದುರುಳರು ಯಾರೇ ಆಗಿದ್ರೂ ಬಿಡೋದಿಲ್ಲ ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ.

ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!