ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಗೆ ಮಂಡ್ಯದ ಜಿಲ್ಲಾ ನ್ಯಾಯಾಲಯ ಹಾಗೂ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಸಮುದಾಯದ 55 ಆರೋಪಿಗಳಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ತಲಾ ಒಂದು ಲಕ್ಷ ರೂ. ಮೌಲ್ಯದ ಬಾಂಡ್, ಪ್ರತಿ ಭಾನುವಾರ ಸಹಿ ಹಾಕಲು ಠಾಣೆಗೆ ಹೋಗಬೇಕು. ಸಾಕ್ಷಿಗಳನ್ನು ಬೆದರಿಸಬಾರದು ಅಥವಾ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ಆರೋಪಿಗಳಿಗೆ ನ್ಯಾಯಾಲಯದ ಷರತ್ತುಗಳನ್ನು ವಿಧಿಸಲಾಗಿದೆ.