ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶ ಪ್ರಕಟಿಸಿದ್ದಾರೆ.
ಇನ್ನೂ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಯಿಂದ ನಾಗಮಂಗಲ ಸಹಜ ಸ್ಥಿತಿಗೆ ಮರಳಿದ್ದರೂ ಬೂದಿ ಮುಚ್ಚಿದ ಕೆಂಡದಂತಿದೆ. ನಾಗಮಂಗಲದ ನೆಮ್ಮದಿ ಕೆಡಿಸಿದ 150 ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 52 ಜನರನ್ನ ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ತಲೆಮರೆಸಿಕೊಂಡ 97 ಗಲಭೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.