ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಕೋಮುಗಲಭೆ ಸಂಭವಿಸಿತ್ತು. ಈ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್ ಬಾಂಬ್ನಿಂದ ಹಲವು ಅಂಗಡಿಗಳು, ಸರಕುಗಳು ಸುಟ್ಟು ಭಸ್ಮವಾಗಿವೆ. ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಾಶವಾಗಿದೆ. ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.
ನಾಗಮಂಗಲ ಪಟ್ಟಣದಾದ್ಯಂತ 26 ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 1 ಕೋಟಿ 47 ಲಕ್ಷ ಮೌಲ್ಯದ ಕಟ್ಟಡಗಳು ಸುಟ್ಟು ಭಸ್ಮವಾಗಿವೆ. 1 ಕೋಟಿ 18 ಲಕ್ಷ ಮೌಲ್ಯದ ಸರಕು ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿದೆ. ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿದೆ.
ಹೀಗಾಗಿ ವರದಿ ತಯಾರು ಮಾಡಲು ಎಸಿ ನೇತೃತ್ವದಲ್ಲಿ ಏಳು ಅಧಿಕಾರ ತಂಡ ರಚನೆ ಮಾಡಲಾಗಿತ್ತು. ಇದೀಗ ನಷ್ಟದ ಮೌಲ್ಯಮಾಪನ ಮಾಡಿ ವರದಿ ಸಿದ್ದಪಡಿಸಿ, ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮಾಹಿತಿ ನೀಡಿದರು. ಇನ್ನು ಎಫ್ಐಆರ್ನಲ್ಲಿ 4.5 ಕೋಟಿಯಷ್ಟು ನಷ್ಟವಾಗಿದೆ ಎಂದು ಉಲ್ಲೇಖಿಸಲಾಗಿದೆ. ದುಷ್ಕರ್ಮಿಗಳ ಕ್ರೌರ್ಯದಿಂದ, ವ್ಯಾಪಾರಸ್ಥರ ಬದುಕು ಬೀದಿ ಪಾಲಾಗಿದೆ