ಕರ್ನಾಟಕದ ಇಂದಿರಾ ಗಾಂಧಿ ಖ್ಯಾತಿಯ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದ ಇಂದಿರಾಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ (90) ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ನಾಳೆ ಮಧ್ಯಾಹ್ನ 3 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಾಳೆ ದಾವಣಗೆರೆಯ ಪಿ.ಬಿ.ರಸ್ತೆಯ ವೈಕುಂಠಧಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

1972, 1978, 1989ರಲ್ಲಿ ಕಾಂಗ್ರೆಸ್ ಶಾಸಕಿಯಾಗಿ ಆಯ್ಕೆಯಾಗಿದ್ದರು. ಗುಂಡೂರಾವ್,‌ ಬಂಗಾರಪ್ಪ, ಮೊಯ್ಲಿ ಸಂಪುಟದಲ್ಲಿ ಸಚಿವೆ ಆಗಿ ಸೇವೆ‌ ಮಾಡಿದ್ದಾರೆ. ಬೃಹತ್​ ಕೈಗಾರಿಕೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ವಿಧಾನಸಭೆಯ ಉಪಸಭಾಪತಿಯಾಗಿ ಸೇವೆ ಸಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!