ಬೆಳಗಾವಿಯಲ್ಲಿ ನಾಗರಪಂಚಮಿ ಸಂಭ್ರಮ: ಉಮಾರಾಮೇಶ್ವರ ದೇವಸ್ಥಾನದಲ್ಲಿ ಶ್ರೀ ವಾಸುಕಿ ಪ್ರಾಣ ಪ್ರತಿಷ್ಠಾಪನೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ತಾಲೂಕಿನ ಸುಕ್ಷೇತ್ರ ದತ್ತ ಮಹಾರಾಜರ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ, ನಾಗರಪಂಚಮಿ ಹಬ್ಬದ ಅಂಗವಾಗಿ ಕದಲಿಪುರ ಉಮಾರಾಮೇಶ್ವರ ದೇವಸ್ಥಾನದಲ್ಲಿ, ಶ್ರೀ ವಾಸುಕಿ ಪ್ರತಿಷ್ಠಾಪನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಪೂಜಾ ಕಾರ್ಯಕ್ರಮವನ್ನು ಸೋಮವಾರ ಭಕ್ತಿಭಾವ ಹಾಗೂ ಧಾರ್ಮಿಕ ಶ್ರದ್ಧೆಯಿಂದ ನೆರವೇರಿಸಲಾಯಿತು. ನಾಗರಪಂಚಮಿ ಪ್ರಯುಕ್ತ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಶ್ರೀ ವಾಸುಕಿ ದೇವರ ಪ್ರತಿಷ್ಠಾಪನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಅರ್ಚಕರು ಶಾಸ್ತ್ರೋಕ್ತವಾಗಿ ಪೂಜಾ ವಿಧಿಗಳನ್ನು … Continue reading ಬೆಳಗಾವಿಯಲ್ಲಿ ನಾಗರಪಂಚಮಿ ಸಂಭ್ರಮ: ಉಮಾರಾಮೇಶ್ವರ ದೇವಸ್ಥಾನದಲ್ಲಿ ಶ್ರೀ ವಾಸುಕಿ ಪ್ರಾಣ ಪ್ರತಿಷ್ಠಾಪನೆ