ನಗರ್ತಪೇಟೆ ಅಗ್ನಿ ಅವಘಡ, ಕಟ್ಟಡ ಮಾಲೀಕ ಸೇರಿ ಇಬ್ಬರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಬಳಿಯ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಮೃತಪಟ್ಟ ಘಟನೆ ಸಂಬಂಧ ಕಟ್ಟಡದ ಮಾಲೀಕ ಮತ್ತು ಆತನ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಅನಧಿಕೃತವಾಗಿ ನಿರ್ಮಾಣ ಕಾಮಗಾರಿ ಮಾಡಿರುವುದು, ಸುರಕ್ಷತಾ ಕ್ರಮಗಳ ಕೊರತೆ ಮತ್ತು ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಕಟ್ಟಡ ಮಾಲೀಕ ಬಾಲಕೃಷ್ಣಯ್ಯ ಶೆಟ್ಟಿ ಮತ್ತು ಅವರ ಪುತ್ರ ಸಂದೀಪ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶನಿವಾರ ನಸುಕಿನಲ್ಲಿ 2.30 ರ ಸುಮಾರಿಗೆ ಕಟ್ಟಡದ ನೆಲಮಹಡಿಯಲ್ಲಿ ಹೊತ್ತಿಕೊಂಡಿದ್ದ ಬೆಂಕಿ ಬಹುಬೇಗನೆ ಮೇಲಿನ ಮಹಡಿಗೆ ವ್ಯಾಪಿಸಿತ್ತು. ಘಟನೆಯಲ್ಲಿ ಐವರು ಮೃತಪಟ್ಟಿದ್ದರು. ಅದೃಷ್ಟವಶಾತ್, ಕಟ್ಟಡದಲ್ಲಿದ್ದ ಹೆಚ್ಚಿವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!