ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದಲ್ಲಿ ರೈಲು ಪರೀಕ್ಷಾರ್ಥ ಸಂಚಾರ ನಡೆಸಲಾಗಿದ್ದು, ಈ ಬಗ್ಗೆ ಬಿಎಂಆರ್‌ಸಿಎಲ್‌ ಮಾಹಿತಿ ಹಂಚಿಕೊಂಡಿದ್ದು, ಈ ಮಾರ್ಗವು ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಮುಕ್ತವಾಗುವ ಸಾಧ್ಯತೆ ಇದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನಮ್ಮ ಮೆಟ್ರೋ, ಆ.17ರಂದು ರೀಚ್-3ರ ಎತ್ತರಿಸಿದ ಮಾರ್ಗದಲ್ಲಿನ -ನಾಗಸಂದ್ರದಿಂದ ಮಾದಾವರೆಗಿನ 3.14 ಕಿ.ಮೀ ನಡುವೆ (ರೋಲ್ಲಿಂಗ್ ಸ್ಟಾಕ್) ಮೆಟ್ರೋ ರೈಲು ಮೂಲಕ ಮೊದಲ ಪರೀಕ್ಷಾರ್ಥ ಸಂಚಾರ ನಡೆದಿದೆ. ಕನಿಷ್ಠ 5 ಕಿ.ಮೀ ಮತ್ತು ಗರಿಷ್ಠ 35 ಕಿ.ಮೀ ವೇಗದಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಾಯಿತು.

https://x.com/OfficialBMRCL/status/1825071187623309321?ref_src=twsrc%5Etfw%7Ctwcamp%5Etweetembed%7Ctwterm%5E1825071187623309321%7Ctwgr%5E94654adb23b9a26dd5b3a9db7edea23cdf111143%7Ctwcon%5Es1_&ref_url=https%3A%2F%2Fvistaranews.com%2Fkarnataka%2Fnamma-metro-metro-rail-trial-run-on-nagasandra-madavara-extended-line%2F717158.html

ನಾಗಸಂದ್ರ-ಮಾದಾವರ ನಡುವಿನ ಮೂರು ಕಿ.ಮೀ. ಮೆಟ್ರೋ ಕಾಮಗಾರಿ 2017 ರಲ್ಲಿ ಪ್ರಾರಂಭವಾಯಿತು. 2019 ರ ಮಧ್ಯದ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿತ್ತಾದರೂ, ಭೂಸ್ವಾಧೀನದಲ್ಲಿ ವಿಳಂಬವಾದ ಕಾರಣ ಕಾಮಗಾರಿ ವಿಳಂಬವಾಗುತ್ತಲೇ ಸಾಗಿತು.

ಪ್ರಾಯೋಗಿಕ ಸಂಚಾರ ಇನ್ನು ಕೆಲ ದಿನಗಳು ನಡೆಯಲಿದ್ದು, ಸೆಪ್ಟೆಂಬರ್‌ ಮೊದಲ ವಾರದಲ್ಲಿ ಸಂಚಾರ ಆರಂಭವಾಗುವ ಸಾಧ್ಯತೆಗಳಿವೆ. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿಯಂದು ಉದ್ಘಾಟನೆ ಮಾಡುವ ಸಾಧ್ಯತೆ ಇದೆ.

ಈ ಮಾರ್ಗದಲ್ಲಿ ನಾಗಸಂದ್ರ, ಮಂಜುನಾಥ ನಗರ, ಜಿಂದಾಲ್‌, ಮಾದಾವರ ಮೆಟ್ರೋ ನಿಲ್ದಾಣ ಬರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!