ನಾಗಸಂದ್ರ-ಮಾದವರ ಸಿಗ್ನಲಿಂಗ್ ವರ್ಕ್: ಹಸಿರು ಮಾರ್ಗದ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ನಡೆಯುವ ಸಲುವಾಗಿ ಕೆಲವು ದಿನಗಳ ಕಾಲ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ.

ಆ.20, ಆ.23 ಮತ್ತು ಆ.30 ಹಾಗೂ ಸೆ.6 ಮತ್ತು ಸೆ.11ರಂದು ಪೀಣ್ಯ ಕೈಗಾರಿಕಾ ಪ್ರದೇಶ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಪೂರ್ಣ ದಿನ ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಆ.24ರಂದು ಕೊನೆಯ ರೈಲು ಸೇವೆಯು ರಾತ್ರಿ 11:05ರ ಬದಲಾಗಿ 10:00 ಗಂಟೆಗೆ ಪ್ರಾರಂಭವಾಗಲಿದೆ. ಆ.25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 5:00 ಗಂಟೆಯ ಬದಲಾಗಿ 06:00 ಗಂಟೆಗೆ ಪ್ರಾರಂಭವಾಗಲಿದೆ.

ಆ.24ರಂದು ಕೊನೆಯ ರೈಲು ರಾತ್ರಿ 11:12ಕ್ಕೆ ಸಂಚರಿಸಲಿದೆ. ಆ.25 ರಂದು ಮೊದಲ ರೈಲು ಸೇವೆಯು ಬೆಳಗ್ಗೆ 05:00ಕ್ಕೆ ಪ್ರಾರಂಭವಾಗಲಿದೆ. ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಮ್ಮ ಮೆಟ್ರೋ ತಿಳಿಸಿದೆ.

ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!