ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗ್ಪುರದ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಎರಡನೇ ದಿನವೂ ಕರ್ಫ್ಯೂ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಈ ಘಟನೆಗೆ ಸಂಬಂಧಿಸಿದಂತೆ 51 ಜನರನ್ನ ಬಂಧಿಸಲಾಗಿದೆ ಎಂದು ನಾಗ್ಪುರ ಪೊಲೀಸ್ ಆಯುಕ್ತ ಡಾ. ರವೀಂದ್ರ ಸಿಂಘಲ್ ತಿಳಿಸಿದ್ದಾರೆ.
ಈ ಘಟನೆಯ ಪ್ರಮುಖ ಸೂತ್ರಧಾರಿ ಎನ್ನಲಾದ ಸ್ಥಳೀಯ ರಾಜಕೀಯ ಮುಖಂಡ ಫಾಹಿಮ್ ಖಾನ್ ನನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.
ಮಹಾರಾಷ್ಟ್ರದ ಸಂಭಾಜಿನಗರದಲ್ಲಿರುವ ಔರಂಗಜೇಬ್ ಸಮಾಧಿಯನ್ನು ತೆರೆವುಗೊಳಿಸುವಂತೆ ಆಗ್ರಹಿಸಿ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಸಮುದಾಯವೊಂದರ ಪವಿತ್ರ ಗ್ರಂಥಕ್ಕೆ ಬೆಂಕಿ ಹಾಕಲಾಗಿದೆ ಎಂಬ ಸುಳ್ಳು ಸುದ್ದಿ ಹರಡಲಾಗಿತ್ತು. ಹೀಗಾಗಿ ನಾಗ್ಪುರದ ಹಲವು ಪ್ರದೇಶಗಳಲ್ಲಿ ಹಿಂಸಾಚಾರ ಭುಗಿಲೆದ್ದಿತು.